ನವದೆಹಲಿ: ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಚುನಾವಣಾ ಪೂರ್ಣ ಮೈತ್ರಿ ಮಾಡಿಕೊಳ್ಳುವುದಿಲ್ಲ. ಉಭಯ ಪಕ್ಷಗಳೂ ಸ್ವತಂತ್ರವಾಗಿಯೇ ಸ್ಪರ್ಧಿಸಲಿವೆ’ ಎಂದು ದೆಹಲಿಯ ರಾಜಧಾನಿಯ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಮುಂದಾಳು ಶೀಲಾ ದೀಕ್ಷಿತ್ ಘೋಷಿಸಿದ್ದಾರೆ.
2019ರ ಲೋಕಸಭಾ ಚುನಾವಣೆ ಸಮೀಪಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳ ನಡುವೆ ಚುನಾವಣಾ ಪೂರ್ಚ ಹೊಂದಾಣಿಕೆಯ ಕುರಿತು ಚರ್ಚಿಸಲು ಇಂದು ಬೆಳಿಗ್ಗೆ ರಾಹುಲ್ ಗಾಂಧಿ ಸಭೆ ಕರೆದಿದ್ದರು.
ಪುಲ್ವಾಮಾ ದಾಳಿಯನ್ನು ಚುನಾವಣೆಗೆ ಬಳಸಿಕೊಂಡಿರುವ ಬಿಜೆಪಿಯನ್ನು ಎದುರಿಸಲು ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಹೊಂದಾಣಿಗೆ ನಡೆಯಬೇಕು ಎಂದು ಕೆಲ ದಿನಗಳ ಹಿಂದೆ ಆಮ್ ಆದ್ಮಿ ನೇತಾರ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಹೇಳಿದ್ದರು. ಈ ವಿಷಯದಲ್ಲಿ ಕಾಂಗ್ರೆಸ್ ಮುಖಂಡರು ಮಕ್ತವಾಗಿಲ್ಲ ಎಂದೂ ಅವರು ಹೇಳಿದ್ದರು.
ರಾಷ್ಟ್ರಮಟ್ಟದಲ್ಲಿ ಬಿಜೆಪಿ ಹೊರತು ಪಡಿಸಿದ ಪಕ್ಷಗಳ ನಡುವೆ ಮಹಾಮೈತ್ರಿ ಏರ್ಪಟ್ಟಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಳ್ಳಬೇಕು ಎಂಬ ಸಲಹೆಯನ್ನು ಟಿಎಂಸಿಯ ಮಮತಾ ಬ್ಯಾನರ್ಜಿ ಮತ್ತು ಆಂಧ್ರ ಪ್ರದೇಶದ ಚಂದ್ರಬಾಬು ನಾಯ್ಡು ಸಹ ನೀಡಿದ್ದರು.
ದೆಹಲಿಯ ಏಳು ಲೋಕಸಭಾ ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳಿಗೆ ಸ್ಪರ್ಧಿಗಳ ಹೆಸರುಗಳನ್ನು ಆಮ್ ಆದ್ಮಿ ಪಕ್ಷವು ಕೆಲ ದಿನಗಳ ಹಿಂದೆ ಘೋಷಿಸಿತ್ತು. ಈ ಪೈಕಿ ಮೂವರಂತೂ ಗಂಭೀರ ಸ್ಪರ್ಧಾಳುಗಳಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳ ನಡುವೆ ಹೊಂದಾಣಿಕೆಯ ಪ್ರಸ್ತಾಪ ಬಂದಿದ್ದು, ಸೀಟು ಹಂಚಿಕೆ ವಿಷಯದಲ್ಲಿ ಭಿನ್ನಾಭಿಪ್ರಾಯ ಕಾಣಿಸಿಕೊಂಡಿತ್ತು.
TruthIndia