- ಸಂಸದ ಪ್ರತಾಪ್ ಸಿಂಹ ಅವರನ್ನು ಬೆಂಗಳೂರು CC 82 ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪೊಲೀಸ್ ಕಸ್ಟಡಿಗೆ ಕಳುಹಿಸಿದೆ
- ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಮೇಲೆ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು. ಇಂದು ನ್ಯಾಯಾಲಯದಲ್ಲಿ ಹಾಜರಾದ ಪ್ರಾತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲು ವಿಶೇಷ ನ್ಯಾಯಾಧೀಶರಾದ ರಾಮಚಂದ್ರ ಡಿ ಹುದ್ದರ್ ಆದೇಶಿಸಿದ್ದಾರೆ. ಸಂಜೆಯ ಹೊತ್ತಿಗೆ ವಾರಂಟ್ ರಿಕಾಲ್ ಮಾಡಿಸಿ ಜಾಮೀನು ಪಡೆದು ಹೊರಬರುವ ನಿರೀಕ್ಷೆಯಿದೆ.
- ಪ್ರತಾಪ್ ಸಿಂಹ ಟ್ವಿಟ್ಟರ್ ನಲ್ಲಿ ಬಹುಭಾಷಾ ನಟ, ರಾಜಕಾರಣಿ ಪ್ರಕಾಶ ರಾಜ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ವಿರುದ್ಧ ಪ್ರಕಾಶ್ ರಾಜ್ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದರು.
- ಈ ಹಿಂದೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಂಸದರಿಗೆ ಅನೇಕ ಬಾರಿ ಸಮನ್ಸ್ ನೀಡಲಾಗಿತ್ತು. ಆದರೂ ಪ್ರತಾಪ್ ಸಿಂಹ ಹಲವು ಬಾರಿ ಕೋರ್ಟ್ ಗೆ ಹಾಜರಾಗದೇ ಇದ್ದರು. ಹೀಗಾಗಿ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು.
- ಇಂದು ಕೋರ್ಟ್ ಗೆ ಪ್ರತಾಪ್ ಸಿಂಹ ಹಾಜರಾಗಿದ್ದರು.
More Articles
By the same author
Related Articles
From the same category