ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಈ ಹಿಂದೆ ಶರದ್ ಪವಾರ್ ಅವರು ಮಹಾರಾಷ್ಟ್ರದ ಮೇಧಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಲಾಗಿತ್ತಾದರೂ, ಈ ಹೇಳಿಕೆಗಳನ್ನು ಅಲ್ಲಗಳೆದಿರುವ ಶರದ್ ಪವಾರ್ ತಾವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಷಷ್ಟನೆ ನೀಡಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ತಿಳಿಸಿದ ಅವರು 14 ಬಾರಿ ನಡೆದ ಲೋಕಸಭಾ ಚುನಾವಣೆಯಲ್ಲಿ ಸತತವಾಗಿ ಸ್ಪರ್ಧಿಸಿದ್ದೇನೆ, ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ತಿಳಿಸಿದ್ದಾರೆ.
ಶರದ್ ಪವಾರ್ ಅವರು ತಮ್ಮ ಬದಲಾಗಿ ಪುತ್ರಿ ಸುಪ್ರಿಯಾ ಸುಲೆ ಸ್ಪರ್ಧಿಸಲಿದ್ದು, ಮೊಮ್ಮಗ ಅಜಿತ್ ಪವಾರ್ ಅಥವಾ ಪಾರ್ಥ ಪವಾರ್ ಅವರನ್ನು ಕಣಕ್ಕಿಳಿಸಲಿದ್ದಾರೆ ಎಂಬ ಊಹಾಪೋಹ ಕೇಳಿಬಂದಿವೆ.
ಅಲ್ಲದೇ, ಶರದ್ ಅವರು ದೇಶದ ಎಲ್ಲಾ ಪ್ರಾದೇಶಿಕ ಪಕ್ಷಗಳ ಪರ ಪ್ರಚಾರ ಮಾಡಲು ಮೈತ್ರಿ ಪಕ್ಷಗಳು ಮನವಿ ಮಾಡಿರಬಹುದು ಎಂದು ಮೂಲಗಳು ತಿಳಿಸಿದೆ.