ಮಂಡ್ಯ: ತಮ್ಮ ಪುತ್ರ ಅಭಿಷೇಕ್, ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟ ದೊಡ್ಡಣ್ಣ ಜೊತೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಗೆ ಪೂಜೆ ಸಲ್ಲಿಸಿದ ಸುಮಲತಾ ಅಂಬರೀಶ್, ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಸಾವಿರಾರು ಸಂಖ್ಯೆಯಲ್ಲಿ ಬೆಂಬಲಿಗರು, ಅಂಬರೀಶ್ ಅಭಿಮಾನಿಗಳ ಸಂಘದ ಸದಸ್ಯರು ಅಲ್ಲದೇ ಕಾಂಗ್ರೆಸ್ ಬೆಂಬಲಿಗರು ಸಹ ಭಾಗವಹಿಸಿದ್ದರು.
ದಿನೇಶ್ ಗುಂಡೂರಾವ್ ಎಚ್ಚರಿಕೆ ನಡುವೆಯೂ ಹಲವು ಕಾಂಗ್ರೆಸ್ ಸದಸ್ಯರು ಸುಮಲತಾಗೆ ಬೆಂಬಲ ನೀಡುತ್ತಿದ್ದಾರೆ ಎನ್ನಲಾಗುತ್ತಿದೆ.
ಸುಮಲತಾ ಮಂಡ್ಯದ ಸಿಲ್ವರ್ ಜುಬಿಲಿ ಮೈದಾನದಲ್ಲಿ ಶಕ್ತಿ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೈಕ್ ರ್ಯಾಲಿ ಮೂಲಕ ಸಿಲ್ವರ್ ಜುಬಿಲಿ ಪಾರ್ಕ್ ಗೆ ತೆರಳಿದ ಸಾವಿರಾರು ಬೆಂಬಲಿಗರು.