ಹಾಸನದಲ್ಲಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ತಂದೆ ರೇವಣ್ಣ, ತಾಯಿ ಭವಾನಿ ರೇವಣ್ಣ ಜೊತೆ ಹಾಸನದ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ರಂಗನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ನಾಮಪತ್ರಕ್ಕೆ ಪ್ರಜ್ವಲ್ ಅವರು ಸಹಿ ಹಾಕಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ, ರೇವಣ್ಣ, ಭವಾನಿ ರೇವಣ್ಣ ಉಪಸ್ಥಿತರಿದ್ದರು. ಕುಮಾರಸ್ವಾಮಿ ಅವರು ಸೂಚಕರಾಗಿ ನಾಮಪತ್ರಕ್ಕೆ ಸಹಿ ಹಾಕಿದರು.
ನಾಮಪತ್ರ ಸಲ್ಲಿಕೆ ನಂತರ ಹಾಸನ ಮೈದಾನದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು, ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.