ದೊಡ್ಡ ಬಳ್ಳಾಪುರ: ದೊಡ್ಡಬಳ್ಳಾಪುರದ ಟ್ರ್ಯಾಕ್ಟರ್ ಗೋಡನ್ ನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಗೋಡನ್ ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಟೈರ್ ಗಳು , ಟ್ರ್ಯಾಕ್ಟರ್ ಸುಟ್ಟು ಭಸ್ಮವಾಗಿದೆ.
ದೊಡ್ಡಬಳ್ಳಾಪುರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿರುವ ಟ್ರ್ಯಾಕ್ಟರ್ ಗೋಡನ್ನಲ್ಲಿ ಇಂದು ಮುಂಜಾನೆ ಘಟನೆ ಸಂಭವಿಸಿದೆ, ಈ ವೇಳೆ ಸಿಬ್ಬಂದಿ ಇಲ್ಲದ ಕಾರಣ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಹೇಳಲಾಗಿದೆ.
ಗೋಡನ್ ನಲ್ಲಿದ್ದ ಬಹುತೇಕ ಟ್ರಾಕ್ಟರ್ ಟೈರುಗಳು ಬೆಂಕಿಗಾಹುತಿಯಾಗಿದೆ, ಹಲವು ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಜಮಾಯಿಸಿದ್ದು, ಬೆಂಕಿ ನಂದಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಬೇಸಿಗೆ ಜತೆಗೆ ಬೆಂಕಿಯ ಭೀಕರತೆ ಹೆಚ್ಚಿರುವುದರಿಂದ ಬೆಂಕಿಯ ಕೆನ್ನಾಲಿಗೆ ಹತೋಟಿಗೆ ಬರುತ್ತಿಲ್ಲ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
ಗೋಡನ್ ಪಕ್ಕದಲ್ಲೇ ಪೆಟ್ರೋಲ್ ಬಂಕ್ ಸಹ ಇರುವುದರಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ ಎನ್ನಲಾಗಿದೆ.