ಬೆಂಗಳೂರು: ತ್ರಿಭಾಷಾ ನೀತಿ ಹೇರಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ಮಾತ್ರವಲ್ಲದೇ ಇಡೀ ದಕ್ಷಿಣ ಭಾರತವೇ ವಿರೋಧ ವ್ಯಕ್ತಪಡಿಸಿದೆ.
ರಾಜ್ಯದ ಸಾಮಾನ್ಯ ಜನತೆ ಸೇರಿದಂತೆ ಪ್ರಮುಖ ನಾಯಕರು ಸಹ ಹಿಂದಿ ಹೇರಿಕೆ ಖಂಡಿಸಿದ್ದು ಕೇಂದ್ರ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಜನತೆ ಸಹ ಪಕ್ಷಾತೀತವಾಗಿ ಭಾಷಾ ಉಳಿವಿಗಾಗಿ ಪಣತೊಟ್ಟಿದ್ದು, ‘ರಾಜ್ಯದಲ್ಲಿ ಹಿಂದಿ ಹೇರಿಕೆ ವಿರುದ್ಧ ಕರ್ನಾಟಕ’ (#KarnatakaAgainstHindiImposition) ಎಂಬ ಹೊಸ ಅಭಿಯಾನವನ್ನು ಸಾಮಾಜಿಕ ಜಾಲತಾದಲ್ಲಿ ಆರಂಭಿಸಲಾಗಿದೆ. ಕೇಂದ್ರ ಸರ್ಕಾರದ ಈ ನಿಲುವು ರಾಜ್ಯದ ಮೇಲೆ ಹೇರಿಕೆಯ ಒತ್ತಡ ಹಾಕಿದರೆ ಮುಂದೆ ರಾಜ್ಯದಲ್ಲಿ ಬೃಹತ್ ಹೋರಾಟ ರೂಪಗೊಳ್ಳುವ ಸಾಧ್ಯತೆ ಇದ್ದು ಗುರುವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಸಿದ್ಧತೆ ನಡೆಯುತ್ತಿದೆ ಎಂದು ಕನ್ನಡಪರ ಸಂಘಟನೆಗಳ ಮೂಲಗಳಿಂದ ತಿಳಿದು ಬಂದಿದೆ.
ರಾಷ್ಟ್ರಭಾಷೆ ಎಂಬ ವಾದಕ್ಕೆ ಪ್ರತಿಯಾಗಿ ಸಂವಿಧಾನದಲ್ಲಿ ಯಾವ ಭಾಷೆಗೂ ರಾಷ್ಟ್ರಭಾಷೆ ಎಂಬ ವಿಶೇಷ ಸ್ಥಾನಮಾನ ನೀಡಲಾಗಿಲ್ಲ ಎಂಬುದನ್ನು ಹಲವು ಸಂದರ್ಭಗಳಲ್ಲಿ ಸ್ಪಷ್ಟಪಡಿಸಲಾಗಿತ್ತು. ಹೀಗಿದ್ದರೂ ಕೇಂದ್ರ ಸರ್ಕಾರ ಮತ್ತೆ ದಕ್ಷಿಣ ರಾಜ್ಯಗಳ ಮೇಲೆ ಒತ್ತಾಯಪೂರ್ವಕವಾಗಿ ಹಿಂದಿ ಹೇರಿಕೆ ಮೂಲಕ ತ್ರಿಭಾಷಾ ಸೂತ್ರ ಅಳವಡಿಸಲು ಮುಂದಾಗಿತ್ತು.
ದಕ್ಷಿಣದಲ್ಲಿ ಹಿಂದಿ ಹೇರಿಕೆ, ಉತ್ತರದಲ್ಲಿಲ್ಲ ನಮ್ಮ ದ್ರಾವಿಡ ಭಾಷೆ
ದಕ್ಷಿಣದಲ್ಲಿ ಉತ್ತರದ ಭಾಷೆಯೆಂದು ಕೇವಲ ಹಿಂದಿಯೊಂದನ್ನೇ ಕಲಿಸಲು ಮುಂದಾದದ್ದು ಹಿಂದಿ ಹೇರಿಕೆಯ ಒಂದು ಭಾಗವೆಂದೇ ನೋಡಬೇಕು. ಅಂತೆಯೇ ಉತ್ತರದ ರಾಜ್ಯಗಳಲ್ಲಿ ದಕ್ಷಿಣದ ಯಾವ ನುಡಿಯನ್ನು ಕಲಿಸದೇ ಕೇವಲ ದ್ವಿಭಾಷಾ ಸೂತ್ರವಾಗಿಸಿಕೊಂಡು ಅಲ್ಲಿನ ಮಕ್ಕಳ ಕಲಿಕೆಯ ಹೊರೆಯನ್ನು ಕಡಿಮೆ ಮಾಡಿಕೊಂಡಿದ್ದನ್ನು ಗಮನಿಸಬೇಕು.
ಶಾಲೆಗೆ ಸೀಮಿತವಾಗಬೇಕಿದ್ದ ಭಾಷೆ ಆಡಳಿತದಲ್ಲೂ ಜಾರಿ
ಶಾಲಾ ಹಂತದಲ್ಲಿ ಮೂರು ಭಾಷೆಗಳನ್ನು ಕಲಿಸಲು ಉತ್ತೇಜನ ನೀಡಲೆಂದು ಹಮ್ಮಿಕೊಳ್ಳಲಾದ ಸೂತ್ರ ನಂತರ ನಿಧಾನವಾಗಿ ಆಡಳಿತದಲ್ಲೂ ಹೇರಿಕೆ ಆರಂಭವಾಯಿತು. ಬರೀ ಶಾಲೆಗೆ ಸೀಮಿತವಾಗಬೇಕಿದ್ದ ಈ ತ್ರಿಭಾಷಾ ಸೂತ್ರವನ್ನೇ ಅಸ್ತ್ರವಾಗಿಸಿಕೊಂಡು ಆಡಳಿತದ ಎಲ್ಲ ಹಂತದಲ್ಲೂ ಹೇರಲಾಯಿತು. ಈಗ ಕೇಂದ್ರ ಸರ್ಕಾರದ ಹೆಚ್ಚಿನ ಕಚೇರಿಗಳಲ್ಲಿ ಸ್ಥಳೀಯ ನುಡಿಯನ್ನೇ ಕೈಬಿಟ್ಟು ಹಿಂದಿ, ಇಂಗ್ಲಿಷಿಗೆ ಮಾತ್ರ ಮನ್ನಣೆ ನೀಡಲಾಗುತ್ತಿರುವುದು ವಿಪರ್ಯಾಸ.
ದ್ರಾವಿಡ ಭಾಷೆಗಳ ಅಸ್ಮಿತೆಗೆ ಕೊಡಲಿ ಪೆಟ್ಟು
ದಕ್ಷಿಣ ರಾಜ್ಯಗಳ ಮೇಲೆ ಹಿಂದಿ ಭಾಷಾ ಹೇರಿಕೆಯಿಂದ ಒಂದು ಭಾಷೆ ಒಂದು ಸಂಸ್ಕೃತಿಯೇ ನಿರ್ನಾಣವಾಗುತ್ತದೆ. ಇದರಿಂದ ದ್ರಾವಿಡ ಭಾಷೆಗಳ ಅಸ್ಮಿತೆಗೆ ಕೊಡಲಿ ಪೆಟ್ಟು ಬಿದ್ದಂತಾಗುತ್ತದೆ. ಇದರಿಂದ ಮುಂದೊಂದು ದಿನ ದ್ರಾವಿಡ ಭಾಷೆಗಳು ಕಣ್ಮರೆಯಾಗುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ತಮಿಳುನಾಡು ಸರ್ಕಾರ ಕೇಂದ್ರ ಸರ್ಕಾರದ ಈ ನೀತಿಯನ್ನು 1969ರಿಂದಲೂ ತೀವ್ರವಾಗಿ ವಿರೋಧಿಸುತ್ತಾ ಬಂದಿತ್ತು. ಒಂದು ಹಂತದಲ್ಲಿ ಸ್ವತಂತ್ರ್ಯ ದ್ರಾವಿಡ ರಾಷ್ಟ್ರದ ಪರಿಕಲ್ಪನೆಯನ್ನೂ ಸಹ ಮುಂದಿಟ್ಟಿತ್ತು.
ಕೊನೆಗೆ ಕೇಂದ್ರದ ನೀತಿಗೆ ಬೆನ್ನು ತೋರಿಸಿದ್ದ ತಮಿಳುನಾಡು ಈವರೆಗೆ ದ್ವಿಭಾಷಾ ಸೂತ್ರವನ್ನು ಮಾತ್ರ ಅನುಸರಿಸುತ್ತಿದೆ. ತಮಿಳುನಾಡಿನಲ್ಲಿ ಕಳೆದ 6 ದಶಕದಿಂದ ಹಿಂದಿ ಕಲಿಕೆ ಕಡ್ಡಾಯವಿಲ್ಲ. ಇದರಂತೆ ಅಲ್ಲಿನ ಮಕ್ಕಳು ತಮಿಳು ಹಾಗೂ ಆಂಗ್ಲ ಭಾಷೆಯನ್ನು ಮಾತ್ರ ಕಲಿಯುತ್ತಿದ್ದಾರೆ. ಆದರೆ, ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಲ್ಲಿ ಮಾತ್ರ ಹಿಂದಿಯನ್ನು ಸಾಮಾನ್ಯವಾಗಿ ಕಲಿಸಲಾಗುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರ ತಮಿಳುನಾಡನ್ನು ಗುರಿಯಾಗಿಸಿಕೊಂಡು ಮತ್ತೆ ತ್ರಿಭಾಷಾ ನೀತಿಯನ್ನು ಕಡ್ಡಾಯಗೊಳಿಸಲು ಮುಂದಾಗಿತ್ತು. ಆದರೆ, ಕೇಂದ್ರದ ಈ ನೀತಿಗೆ ಇದೀಗ ಕರ್ನಾಟಕ ಸೇರಿದಂತೆ ಉಳಿದೆಲ್ಲಾ ದಕ್ಷಿಣ ರಾಜ್ಯಗಳು ಒಮ್ಮೆಲೆ ತಿರುಗಿಬಿದ್ದಿವೆ.
ಹಿಂದಿ ಹೇರಿಕೆ ಖಂಡಿಸಿದ ರಾಜ್ಯದ ನಾಯಕರು
ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಹೊರಡಿಸಿದ ತ್ರಿಭಾಷಾ ನೀತಿ ರಾಜ್ಯದಲ್ಲಿ ಕಡ್ಡಾಯವಾಗಿ ಜಾರಿಯಾಗಬೇಕು ಎಂಬ ತೀರ್ಮಾನ ವ್ಯಕ್ತಬಾಗುತ್ತಿದ್ದಂತೆಯೇ ರಾಜ್ಯ ನಾಯಕರು ಇದನ್ನು ಸಾರಾಸಗಟಾಗಿ ಖಂಡಿಸಿದ್ದಾರೆ.
ಈ ಕುರಿತು ಟ್ವಿಟ್ಟರ್ ಮೂಲಕ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, “ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಹೊರಡಿಸಿದ ಶಿಕ್ಷಣ ಕರಡು ಕಾರ್ಯನೀತಿಯಲ್ಲಿ ಹಿಂದಿ ಹೇರಿಕೆಯ ಬಗ್ಗೆ ನನ್ನ ಗಮನಕ್ಕೆ ಬಂದಿದೆ. 3-ಭಾಷಾ ಸೂತ್ರದ ಹೆಸರಿನಲ್ಲಿ ಒಂದು ಭಾಷೆಯನ್ನು ಇತರರ ಮೇಲೆ ಯಾವ ಕಾರಣಕ್ಕೂ ಹೇರಬಾರದು. ಇದರ ಬಗ್ಗೆ ಹೆಚ್ಚಿನ ಮಾಹಿತಿ ಪಡೆದು ರಾಜ್ಯ ಸರ್ಕಾರದ ನಿಲುವನ್ನು ಕೇಂದ್ರಕ್ಕೆ ತಿಳಿಸಲಾಗುವುದು” ಎಂದಿದ್ದರು.
ನಿನ್ನೆ @HRDMinistry ರವರು ಹೊರಡಿಸಿದ ಶಿಕ್ಷಣ ಕರಡು ಕಾರ್ಯನೀತಿಯಲ್ಲಿ ಹಿಂದಿ ಹೇರಿಕೆಯ ಬಗ್ಗೆ ನನ್ನ ಗಮನಕ್ಕೆ ಬಂದಿದೆ.
3-ಭಾಷಾ ಸೂತ್ರದ ಹೆಸರಿನಲ್ಲಿ ಒಂದು ಭಾಷೆಯನ್ನು ಇತರರ ಮೇಲೆ ಯಾವ ಕಾರಣಕ್ಕೂ ಹೇರಬಾರದು.
ಇದರ ಬಗ್ಗೆ ಹೆಚ್ಚಿನ ಮಾಹಿತಿ ಪಡೆದು ರಾಜ್ಯ ಸರ್ಕಾರದ ನಿಲುವನ್ನು ಕೇಂದ್ರಕ್ಕೆ ತಿಳಿಸಲಾಗುವುದು.#HindiImposition
— H D Kumaraswamy (@hd_kumaraswamy) June 2, 2019
ರಾಜ್ಯ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ತ್ರಿಭಾಷಾ ನೀತಿ ವಿರುದ್ಧ ಖಂಡನೆ ವ್ಯಕ್ತಪಡಿಸಿದ್ದು, “ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಕನ್ನಡಿಗರ ಮೇಲೆ ಹಿಂದಿ ಹೇರಿಕೆಯನ್ನು ಸಹಿಸಲಾಗದು. ಕನ್ನಡ ನಮ್ಮ ಅಸ್ಮಿತೆ. ನೆಲ, ಜಲ ಹಾಗೂ ಭಾಷೆಯ ವಿಚಾರದಲ್ಲಿ ರಾಜಿಯಾಗುವ ಪ್ರಶ್ಮೆಯೇ ಇಲ್ಲ. ರಾಜ್ಯದ ಜನಪ್ರತಿನಿಧಿಗಳೆಲ್ಲರೂ ಪಕ್ಷಾತೀತವಾಗಿ ಚಿಂತನೆ ಮಾಡಬೇಕೆಂದು ನನ್ನ ಮನವಿ,” ಎಂದು ರಾಜ್ಯ ನಾಯಕರಿಗೂ ಕರೆ ನೀಡಿದ್ದಾರೆ.
ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಕನ್ನಡಿಗರ ಮೇಲೆ ಹಿಂದಿ ಹೇರಿಕೆಯನ್ನು ಸಹಿಸಲಾಗದು. ಕನ್ನಡ ನಮ್ಮ ಅಸ್ಮಿತೆ. ನೆಲ, ಜಲ ಹಾಗೂ ಭಾಷೆಯ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ರಾಜ್ಯದ ಜನಪ್ರತಿನಿಧಿಗಳೆಲ್ಲರೂ ಪಕ್ಷಾತೀತವಾಗಿ ಚಿಂತನೆ ಮಾಡಬೇಕೆಂದು ನನ್ನ ಮನವಿ.#StopHindiImposition
— Siddaramaiah (@siddaramaiah) June 3, 2019
ಮತ್ತೊಂದು ಟ್ವೀಟ್ನಲ್ಲಿ, “ಶಿಕ್ಷಣದಲ್ಲಿ ಮಾತೃಭಾಷೆಯಲ್ಲದ ಭಾಷೆ ಐಚ್ಛಿಕವಾಗಿರಬೇಕೆ ಹೊರತು ಕಡ್ಡಾಯವಾಗಬಾರದು. ಇದು ಇನ್ನೊಂದು ಭಾಷೆಯ ಒತ್ತಾಯಪೂರ್ವಕ ಹೇರಿಕೆಯಂತಾಗಿದೆ. ಮಗುವಿನ ಕಲಿಕೆಯ ಶಕ್ತಿಯನ್ನು ಕುಂಠಿತಗೊಳಿಸುತ್ತದೆ. ಹಿಂದಿ ಭಾಷಿಗರಲ್ಲದವರ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟಿರುವುದು ಭಾರತ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ ಎಂಬುದು ನನ್ನ ಭಾವನೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಶಿಕ್ಷಣದಲ್ಲಿ ಮಾತೃಭಾಷೆಯಲ್ಲದ ಭಾಷೆ ಐಚ್ಛಿಕವಾಗಿರಬೇಕೆಯೇ ಹೊರತು ಕಡ್ಡಾಯವಾಗಬಾರದು. ಇದು ಇನ್ನೊಂದು ಭಾಷೆಯ ಒತ್ತಾಯಪೂರ್ವಕ ಹೇರಿಕೆಯಂತಾಗಿ ಮಗುವಿನ ಕಲಿಕೆಯ ಶಕ್ತಿಯನ್ನು ಕುಂಠಿತಗೊಳಿಸುತ್ತದೆ.
ಹಿಂದಿ ಭಾಷಿಗರಲ್ಲದವರ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟಿರುವುದು ಭಾರತದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ ಎಂಬುದು ನನ್ನ ಭಾವನೆ.— Siddaramaiah (@siddaramaiah) June 3, 2019
ಅಲ್ಲದೇ ಸುದ್ದಿಗಾರರ ಬಳಿ ಈ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಕೇಂದ್ರ ಸರ್ಕಾರ ಏಕಮುಖ ನಿರ್ಧಾರಕ್ಕೆ ಮುಂದಾಗುತ್ತಿದೆ. ಹಿಂದಿ ಭಾಷೆ ಬೇಕೆಂದು ನಾವೇನು ಕೇಳಿದ್ದೇವೆಯೇ?, ಕೇಂದ್ರದ ಈ ನೀತಿ ಕನ್ನಡಿಗರ ಮೇಲೆ ಬಲವಂತದ ಹಿಂದಿ ಹೇರಿಕೆಯಾಗಿದೆ. ನೆಲ, ಜಲ, ಭಾಷೆ ವಿಚಾರದಲ್ಲಿ ರಾಜಿ ಇಲ್ಲ. ಬಲವಂತವಾಗಿ ಯೋಜನೆ ಜಾರಿಗೆ ಮುಂದಾದರೆ ನಾವು ತಮಿಳುನಾಡು ಮಾದರಿಯ ಹೋರಾಟ ಮಾಡಲು ಸಿದ್ಧ” ಎಂದೂ ಎಚ್ಚರಿಕೆ ನೀಡಿದ್ದಾರೆ.
ಹಿಂದಿ ಹೇರಿಕೆ ವಿರುದ್ಧ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಕೇಂದ್ರ ಸರ್ಕಾರದ ಈ ನೀತಿ ರಾಜ್ಯಗಳ ಸಂವೇದನೆ ಹಾಗೂ ಉತ್ತಮ ಹಿತಾಸಕ್ತಿಗಳನ್ನು ಪ್ರತಿಬಿಂಬಿಸುವಂತಿರಬೇಕು. ಆದರೆ, ಈ ಭಾಷಾ ನೀತಿ ನಮ್ಮ ಹಿತಾಸಕ್ತಿಗೆ ಅನುಗುಣವಾಗಿಲ್ಲ. ಹೀಗಾಗಿ ರಾಜ್ಯದ ಮೇಲಿನ ಯಾವುದೇ ಭಾಷಾ ಹೇರಿಕೆಯನ್ನು ನಾವು ವಿರೋಧಿಸುತ್ತೇವೆ” ಎಂದು ತಿಳಿಸಿದ್ದಾರೆ.
We shall go through & respond to the draft National Education Policy released by MHRD for feedback.
We are committed to demand that the policy reflect the sensibilities & best interests of our States. We shall oppose the imposition of any language! #StopHindiImposition
— Dr. G Parameshwara (@DrParameshwara) June 2, 2019
ಒಟ್ಟಾರೆ ಕೇಂದ್ರದಲ್ಲಿ ಹೊಸ ಎರಡನೇ ಅವಧಿಗೆ ಬಿಜೆಪಿ ಸರ್ಕಾರ ಮತ್ತೆ ಅಧಿಕಾರ ಹಿಡಿದ ಕೇವಲ ಮೂರು ದಿನಗಳಲ್ಲಿ ದಕ್ಷಿಣ ಭಾರತದ ಮೇಲೆ ಹಿಂದಿ ಭಾಷೆ ಹೇರಿಕೆಗೆ ಮುಂದಾಗಿದೆ. ಈ ಹಿಂದೆಯೂ ಹಲವು ಬಾರಿ ಕೇಂದ್ರ ಸರ್ಕಾರ ಹಿಂದಿ ಹೇರಿಕೆಗೆ ಮುಂದಾದಾಗಲು ದಕ್ಷಿಣ ರಾಜ್ಯಗಳು ಅದರಲ್ಲೂ ಮುಖ್ಯವಾಗಿ ತಮಿಳುನಾಡು ಪ್ರಬಲವಾಗಿ ವಿರೋಧಿಸಿತ್ತು. ಇದೀಗ ಕರ್ನಾಟಕ, ಕೇರಳ ಹಾಗೂ ಆಂಧ್ರಪ್ರದೇಶ ಸಹ ಒಟ್ಟಾಗಿ ಕೇಂದ್ರದ ವಿರುದ್ಧ ಹಿಂದಿ ಹೇರಿಕೆ ವಿರೋಧದ ಹೋರಾಟಕ್ಕೆ ಧನಿಗೂಡಿಸಿರುವುದು ಮುಂದಿನ ದಿನಗಳಲ್ಲಿ ದೊಡ್ಡ ಚಳುವಳಿಯಾಗಿ ರೂಪಗೊಂಡರೂ ಅಚ್ಚರಿ ಇಲ್ಲ.
ಬಿಜೆಪಿ ನಾಯಕರಿಂದ ಹಿಂದಿ ಹೇರಿಕೆಗೆ ಸಮ್ಮತಿ
ಕೇಂದ್ರದಲ್ಲಿ ಹೊಸ ಎರಡನೇ ಅವಧಿಗೆ ಬಿಜೆಪಿ ಸರ್ಕಾರ ಮತ್ತೆ ಅಧಿಕಾರ ಹಿಡಿದ ಕೇವಲ ಮೂರು ದಿನಗಳಲ್ಲಿ ದಕ್ಷಿಣ ಭಾರತದ ಮೇಲೆ ಹಿಂದಿ ಭಾಷೆ ಹೇರಿಕೆಗೆ ಮುಂದಾಗಿದೆ. ರಾಜ್ಯದ ಬಿಜೆಪಿ ನಾಯಕರು ಸ್ಥಳೀಯ ಭಾಷೆಯ ಉಳಿವು ಅಳಿವನ್ನೂ ಲೆಕ್ಕಿಸದೇ, ರಾಜಕೀಯ ಪ್ರೇರಿತವಾಗಿ ಕೇಂದ್ರದ ನಿರ್ಧಾರಕ್ಕೆ ಸಮ್ಮತಿ ಸೂಚಿಸಿದ್ದಾರೆ. ಜೊತೆಗೆ ಹಿಂದಿ ಭಾಷೆ ಹೇರಿಕೆ ಬಗ್ಗೆ ಯಾರೂ ಆಕ್ರೋಶ ವ್ಯಕ್ತಪಡಿಸುವ ಅಗತ್ಯ ಇಲ್ಲ ಎಂದು ಸಹ ಸಲಹೆ ನೀಡಿದ್ದು ಜನತೆಯ ಆಕ್ರೋಶಕ್ಕೆ ತುತ್ತಾಗಿದೆ.
ರಾಜಕೀಯ ಮುಖಂಡರ ಇಷ್ಟೆಲ್ಲಾ ಪರ-ವಿರೋಧಗಳ ನಡುವೆ ಸಾಮಾನ್ಯ ಜನತೆಯ ಅಭಿಪ್ರಾಯಕ್ಕೆ ಕೇಂದ್ರ ಮಣಿಯಲೇ ಬೇಕಿದೆ. ಇಂದಿನಿಂದ ಆರಂಭವಾಗುತ್ತಿರುವ ಅಭಿಯಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಕೈಜೋಡಿಸುವ ಮೂಲಕ ನಮ್ಮ ದ್ರಾವಿಡ ಭಾಷೆಯ ಉಳಿವಿಗಾಗಿ ಸಂಕಲ್ಪ ತೊಡಬೇಕಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ಹಿಂಧಿ ಹೇರಿಕೆ ಖಂಡಿಸಿರುವ ಜನಭಿಪ್ರಾಯ ಹೀಗಿದೆ
The two biggest lies of modern India 👇🏼#StopHindiImposition #StopSanskritImposition pic.twitter.com/pkczzfhhc7
— Srujana Deva #StopHindiImposition (@SrujanaDeva) June 2, 2019
Children in non-Hindi states are being 'encouraged' for decades to learn Hindi and many of us have as well. Now tell me how many children in Hindi states have learnt Kannada, Tamil, Malayalam, Telugu, Tulu, Konkani or Beary living in their own states? #StopHindiImposition https://t.co/FomQpzwX44
— Pooja Prasanna (@PoojaPrasanna4) June 2, 2019
If you like any language, you go and learn individually.. don’t impose to our children.#StopHindiImposition pic.twitter.com/8CLalR31vC
— Thiagu Thamilan (@thyahu) June 2, 2019
Hindi is just other language not a national language..! We don't need Hindi..! தமிழ் is our Identify and pride..! #HindiIsNotTheNationalLanguage #StopHindiImposition#TamilIsOurPride😍 pic.twitter.com/majeR8sPgx
— Praveen Mano🏏 (@isravel_m25) June 2, 2019