ಬೆಂಗಳೂರು: ನಗರದ ಅಮೃತಹಳ್ಳಿಯ ಲುಂಬಿನಿ ಗಾರ್ಡನ್ ಬಳಿಯ ಜೋಗಪ್ಪ ಬಡಾವಣೆಯಲ್ಲಿ ಬಿಡಬ್ಲೂಎಸ್ಎಸ್ಬಿ ನಿರ್ಮಿಸುತ್ತಿದ್ದ ನಿರ್ಮಾಣ ಹಂತದ ವಾಟರ್ ಟ್ಯಾಂಕ್ ಸೆಂಟ್ರಿಂಗ್ ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
25ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದು, ನಾಲ್ವರು ಅವಶೇಷಗಳಡಿ ಸಿಲುಕಿರುವ ಅನುಮಾನ ವ್ಯಕ್ತವಾಗಿದೆ.
ವಾಟರ್ ಟ್ಯಾಂಕ್ ಒಳಗೆ 25 ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಟ್ಯಾಂಕ್ ಸೆಂಟ್ರಿಂಗ್ ಕುಸಿದುಬಿದ್ದಿದೆ, ಇಪ್ಪತ್ತಕ್ಕೂ ಹೆಚ್ಚು ಜನರನ್ನು ರಕ್ಷಿಸಿ, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಅವಶೇಷಗಳಡಿ ನಾಲ್ವರು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕಾಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಮೃತರು ಬಿಹಾರ ಮತ್ತು ಕೊಲ್ಕತ್ತಾ ಮೂಲದವರು ಎಂದು ಹೇಳಲಾಗಿದೆ.