ಬೆಂಗಳೂರು- ಗ್ರಂಥಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಕೆಲಸ ಖಾಯಂ ಮಾಡುವಂತೆ ಆಗ್ರಹಿಸಿ ವಿಧಾನಸೌಧದಲ್ಲಿ ಕತ್ತು ಹಾಗೂ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಆನೂರು ಗ್ರಾಮದ ನಿವಾಸಿಯಾದ ಮೂಲದ ಆರ್.ರೇವಣ್ಣ ಕುಮಾರ್(44) ಅವರು ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಆನೂರು ಗ್ರಾಮದಲ್ಲಿ ಗ್ರಂಥಾಲಯದಲ್ಲಿ ಸಹಾಯಕ ಗ್ರಂಥಪಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ರೇವಣ್ಣ, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಹುದ್ದೆ ಖಾಯಂ ಮಾಡಿ, ವೇತನ ಹೆಚ್ಚಳ ಮಾಡಬೇಕು, ಈ ಮೂಲಕ 6000 ಗುತ್ತಿಗೆದಾರರಿಗೆ ನ್ಯಾಯ ಒದಗಿಸುವುದು ಸೇರಿದಂತೆ ಇನ್ನಿತರ ಬೇಡಿಕೆಗಳುಳ್ಳ ಪತ್ರವನ್ನು ತೆಗೆದುಕೊಂಡು ಇಂದು ಮಧ್ಯಾಹ್ನ ವಿಧಾನಸೌಧಕ್ಕೆ ಬಂದು ಮೂರನೇ ಮಹಡಿಯ ಕೊಠಡಿ ಸಂಖ್ಯೆ 322ರ ಸಾರ್ವಜನಿಕ ಶೌಚಾಲಯದಲ್ಲಿ ಕತ್ತು ಮತ್ತು ಕೈ ಕೊಯ್ದುಕೊಂಡಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ವಿವಿಧ ಕೆಲಸದ ನಿಮಿತ್ತ ವಿಧಾನಸೌಧಕ್ಕೆ ಬಂದಿದ್ದ ಸಾರ್ವಜನಿಕರು ಶೌಚಾಲಯದಲ್ಲಿ ವ್ಯಕ್ತಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಗಮನಿಸಿ ಅಲ್ಲಿನ ಪೊಲೀಸರಿಗೆ ತಿಳಿಸಿದ್ದಾರೆ.
ತಕ್ಷಣ ಪೊಲೀಸರು ಶೌಚಾಲಯದ ಬಳಿ ತೆರಳಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಸಂಬಂಧ ವಿಧಾನಸೌಧ ಠಾಣೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
Please support them
Manya Mukyamantrigallige nanna manavi