ಉಡುಪಿ ಜಿಲ್ಲೆಯ ಕಾರ್ಕಳ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಗೋಪಾಲ್ ಭಂಡಾರಿಯವರು ಹೃದಯಾಘಾತದಿಂದ ನಿಧನರಾದ ಆಘಾತಕಾರಿ ಸುದ್ದಿ ಈಗ ತಾನೇ ವರದಿಯಾಗಿದೆ.
ಮಧ್ಯಾಹ್ನ 2 ಘಂಟೆಗೆ ಬೆಂಗಳೂರಿನಿಂದ ಮಂಗಳೂರಿಗೆ ಹೊರಟಿದ್ದ ವೋಲ್ವೋ ಬಸ್ ನಲ್ಲಿ ಗೋಪಾಲ್ ಭಂಡಾರಿಯವರು ಪ್ರಯಾಣಿಸುತ್ತಿದ್ದರೆಂದು ತಿಳಿದುಬಂದಿದೆ. ರಾತ್ರಿ ಮಂಗಳೂರಿನ ಬಸ್ ನಿಲ್ದಾಣ ತಲುಪಿದ ನಂತರವೂ ಅವರು ಇಳಿಯದೇ ಇದ್ದದ್ದನ್ನು ಕಂಡ ಬಸ್ ನ ನಿರ್ವಾಹಕರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆನ್ನಲಾಗಿದೆ. ಕೂತಲ್ಲೇ ಹೃದಯಾಘಾತವಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಇದೀಗ ವೆನ್ಲಾಕ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ಹೇಳಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.
ಗೋಪಾಲ್ ಭಂಡಾರಿಯವರಿಗೆ 66 ವರ್ಷ ವಯಸ್ಸಾಗಿತ್ತು. ಕಾಂಗ್ರೆಸ್ ನಾಯಕರಾಗಿದ್ದ ಅವರು ರಾಜ್ಯ ವಿಧಾನಸಭೆಯಲ್ಲಿ ಕಾರ್ಕಳ ಕ್ಷೇತ್ರವನ್ನು ಎರಡು ಬಾರಿ ಪ್ರತಿನಿಧಿಸಿದ್ದರು.