ಬ್ರೇಕಿಂಗ್ ಸುದ್ದಿ

ವಿವಾದ, ಗೊಂದಲಗಳ ನಡುವೆ ನಾಲ್ಕನೇ ಬಾರಿಗೆ ಸಿಎಂ ಆಗಿ ಬಿಎಸ್ ವೈ ಪ್ರಮಾಣ!

ಹಲವು ಅನುಮಾನ, ಆರೋಪ ಮತ್ತು ವಿವಾದಗಳ ನಡುವೆಯೇ ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ರಾಜ್ಯದ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಪ್ರಮಾಣ ವಚನವನ್ನೂ ಸ್ವೀಕರಿಸಿದ್ದಾರೆ. ಆದರೆ, ಈಗಾಗಲೇ ಏಳು ದಿನ, ಮೂರು ದಿನ ಹಾಗೂ ಎರಡೂವರೆ ವರ್ಷಗಳ ಅವಧಿಗೆ ಮುಖ್ಯಮಂತ್ರಿಯಾಗಿ ದೇಶದಲ್ಲೇ ಅತಿ ಕಡಿಮೆ ಅವಧಿಗೆ ಮುಖ್ಯಮಂತ್ರಿಯಾದ ವ್ಯಕ್ತಿ ಎಂಬ ದಾಖಲೆ ಬರೆದಿರುವ ಯಡಿಯೂರಪ್ಪ, ಈ ಬಾರಿ ಎಷ್ಟು ಕಾಲ ಆ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಎಂಬುದು ಸದ್ಯದ ಪ್ರಶ್ನೆ.